ಅಭಿಪ್ರಾಯ / ಸಲಹೆಗಳು

ಪರಿಚಯ​

ರಾಜ್ಯ ಯೋಜನಾ ಮಂಡಳಿಯನ್ನು ದಿನಾಂಕ:04.10.1993ರ ಕಾರ್ಯಕಾರಿ ಆದೇಶದ ಅಡಿಯಲ್ಲಿ ರಾಜ್ಯದ ಯೋಜನೆಗಳು, ಕಾರ್ಯಕ್ರಮಗಳು ಮತ್ತು ಆದ್ಯತೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡುವ ಉದ್ದೇಶದಿಂದ ರಚಿಸಲಾಗಿತ್ತು. ಸರ್ಕಾರದ ಆದೇಶ ಸಂಖ್ಯೆ PDS 47 SPB 2021 ದಿನಾಂಕ: 03.04.2021 ರಂದು ರಾಜ್ಯ ಯೋಜನಾ ಮಂಡಳಿಯನ್ನು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ (KSPPC) ಎಂದು ಮರುನಾಮಕರಣ ಮಾಡಲಾಯಿತು. ಸರ್ಕಾರದ ಆದೇಶ ಸಂಖ್ಯೆ: PDS 47 SPB 2021, ದಿನಾಂಕ:06.08.2022 ರಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು ಕರ್ನಾಟಕ ರಾಜ್ಯ ಪರಿವರ್ತನೆಯ ಸಂಸ್ಥೆಯಾಗಿ (SITK) ಪುನರ್ ರಚಿಸಲಾಗಿತ್ತು. ತದನಂತರ, ಸರ್ಕಾರದ ಆದೇಶ ಸಂಖ್ಯೆ PDS 62 SPB 2024 ದಿನಾಂಕ:15.03.2024 ರನ್ವಯ ಕರ್ನಾಟಕ ರಾಜ್ಯ ಪರಿವರ್ತನೆಯ ಸಂಸ್ಥೆ (SITK) ಯನ್ನು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ (KSPPC) ವೆಂದು ಮರುನಾಮಕರಣ ಮಾಡಿ ಸರ್ಕಾರವು ಆದೇಶಿಸಿದೆ.

 

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಪ್ರಮುಖ ಗುರಿಗಳು ಮತ್ತು ಚಟುವಟಿಕೆಗಳಾದ ಸಾಕ್ಷ್ಯಾಧಾರಿತ ನೀತಿ, ಕಾರ್ಯತಂತ್ರದ ಸೂತ್ರೀಕರಣ, ವಿಕೇಂದ್ರೀಕೃತ ಯೋಜನೆ ಮತ್ತು ಫಲಿತಾಂಶ-ಆಧಾರಿತ ಆಯ-ವ್ಯಯಗಳನ್ನು ಒಳಗೊಂಡಿದೆ. ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವು ರಾಜ್ಯದ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳ ಆದ್ಯತೆಗೆ ಅನುಗುಣವಾಗಿ ಸರ್ಕಾರದ ನೀತಿಗಳು, ಆಯ-ವ್ಯಯ ಮತ್ತು ಕಾರ್ಯತಂತ್ರದ ದಾಖಲೆಗಳ ತಯಾರಿಕೆಗೆ ಪೂರ್ವಭಾವಿಯಾಗಿ ಮಾರ್ಗದರ್ಶನ ನೀಡುತ್ತದೆ ಮತ್ತು ಕಾರ್ಯಕ್ರಮಗಳ ಮೇಲ್ವಿಚಾರಣೆ ಮತ್ತು ಅನುಷ್ಠಾನವನ್ನು ಬೆಂಬಲಿಸುತ್ತದೆ. ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವು "ಜಿಲ್ಲೆಗಳನ್ನು ಆರ್ಥಿಕ ಬೆಳವಣಿಗೆಯ ಕೇಂದ್ರ ಬಿಂದು"ವನ್ನಾಗಿ ಮಾಡುವ ಮೂಲಕ ವಿಕೇಂದ್ರೀಕೃತ ಆಡಳಿತವನ್ನು ಬಲಪಡಿಸುತ್ತದೆ.

ಇತ್ತೀಚಿನ ನವೀಕರಣ​ : 16-03-2024 01:29 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ (KSPPC)
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080